ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು 2026ರ ಜೂನ್ 3ರಂದು ಅಧಿಕಾರ ಸ್ವೀಕರಿಸಿದ ಬಳಿಕ, ಆಡಳಿತದ ಮೊದಲ ಹಂತದಲ್ಲೇ ವಿದ್ಯಾರ್ಥಿಗಳು, ಯುವಜನತೆ, ರೈತರು, ಸರ್ಕಾರಿ ನೌಕರರು, ನಿರುದ್ಯೋಗಿಗಳ ಸಮಸ್ಯೆ ಹಾಗೂ ಬೆಂಗಳೂರಿನ ಮೂಲಸೌಕರ್ಯಕ್ಕೆ ಒತ್ತು ನೀಡುವ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ

ಅಧಿಕಾರ ಸ್ವೀಕರಿಸಿದ ಮೊದಲ ಸಚಿವ ಸಂಪುಟ ಸಭೆಯಲ್ಲೇ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರಿ ನಾನ್-ಲಕ್ಸುರಿ ಬಸ್ಗಳಲ್ಲಿ ಉಚಿತ ಪ್ರಯಾಣ, ಖಾಸಗಿ ವಲಯದ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ಯೋಗ ವಿನಿಮಯ ವ್ಯವಸ್ಥೆ, ರಾಜ್ಯಾದ್ಯಂತ 10 ಸಾವಿರ ಯುವ ಸಂಘಗಳ ಸ್ಥಾಪನೆ ಹಾಗೂ ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ₹2 ಸಾವಿರ ಕೋಟಿ ಸೇರಿದಂತೆ ಹಲವು ನಿರ್ಧಾರಗಳನ್ನು ಪ್ರಕಟಿಸುವ ಮೂಲಕ ಶಿವಕುಮಾರ್ ಸರ್ಕಾರ ತನ್ನ ಆದ್ಯತೆಗಳನ್ನು ಸ್ಪಷ್ಟಪಡಿಸಿತು.
ಅಧಿಕಾರ ಸ್ವೀಕರಿಸಿದ ಮೊದಲ ಸಚಿವ ಸಂಪುಟ ಸಭೆಯಲ್ಲೇ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರಿ ನಾನ್-ಲಕ್ಸುರಿ ಬಸ್ಗಳಲ್ಲಿ ಉಚಿತ ಪ್ರಯಾಣ, ಖಾಸಗಿ ವಲಯದ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ಯೋಗ ವಿನಿಮಯ ವ್ಯವಸ್ಥೆ, ರಾಜ್ಯಾದ್ಯಂತ 10 ಸಾವಿರ ಯುವ ಸಂಘಗಳ ಸ್ಥಾಪನೆ ಹಾಗೂ ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ₹2 ಸಾವಿರ ಕೋಟಿ ಸೇರಿದಂತೆ ಹಲವು ನಿರ್ಧಾರಗಳನ್ನು ಪ್ರಕಟಿಸುವ ಮೂಲಕ ಶಿವಕುಮಾರ್ ಸರ್ಕಾರ ತನ್ನ ಆದ್ಯತೆಗಳನ್ನು ಘೋಷಣೆ ಮಾಡಿದ್ರು
ವಿದ್ಯಾರ್ಥಿ-ಯುವಜನತೆಗೆ ಮೊದಲ ಆದ್ಯತೆ
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನಿರ್ಧಾರ ಮಾಡುವ ಮೂಲಕ ಶಾಲೆಯಿಂದ ಸ್ನಾತಕೋತ್ತರ ಹಂತದವರೆಗಿನ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಕಲ್ಪಿಸುವ ಉದ್ದೇಶವನ್ನು ಸರ್ಕಾರ ಪ್ರಕಟಿಸಿತು
72 ಸಾವಿರ ಸರ್ಕಾರಿ ಹುದ್ದೆಗಳತ್ತ ಸರ್ಕಾರದ ಚಿತ್ತ
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಮತ್ತೊಂದು ಪ್ರಮುಖ ಭರವಸೆಯಾಗಿ 72 ಸಾವಿರ ಖಾಲಿ ಹುದ್ದೆಗಳ ಭರ್ತಿಯನ್ನು ಸರ್ಕಾರ ಮುಂದಿಟ್ಟಿದೆ. ಮುಖ್ಯಮಂತ್ರಿಯವರ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ, ಪ್ರಮುಖ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ ಆರು ತಿಂಗಳಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಲಾಯಿತು.
ಗ್ರಾಮೀಣ ವಿದ್ಯಾರ್ಥಿಗಳಿಗೆ ಹೊಸ ಅವಕಾಶ
ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶ ಹೆಚ್ಚಿಸುವ ಉದ್ದೇಶದಿಂದ ‘ವಿದ್ಯಾರ್ಥಿ ಸಹಾಯ ಹಸ್ತ’ ಯೋಜನೆಯನ್ನು ಘೋಷಿಸಲಾಗಿದೆ. ವೃತ್ತಿಪರ ಶಿಕ್ಷಣದಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 7.5% ಮೀಸಲಾತಿ ನೀಡುವ ಪ್ರಸ್ತಾಪ ಇದರಲ್ಲಿ ಪ್ರಮುಖವಾಗಿದೆ.
‘ರೈತ ಚೈತನ್ಯ’ದಿಂದ ಕೃಷಿಯಲ್ಲಿ ಹೊಸ ಅಧ್ಯಾಯ
ರೈತರ ಬೆಳೆಗಳ ಮೇಲ್ವಿಚಾರಣೆಗೆ ಇನ್ಮುಂದೆ ಡ್ರೋನ್–ಉಪಗ್ರಹ ತಂತ್ರಜ್ಞಾನ ಬಳಕೆ, ಬೆಳೆ ಮಾಹಿತಿ ಮತ್ತು ಕೀಟ–ರೋಗಗಳ ಮುನ್ಸೂಚನೆ ನೀಡಲು ಸರ್ಕಾರದ ಹೊಸ ಹೆಜ್ಜೆ.
ಮೂರು ಎಕರೆವರೆಗೆ ಜಮೀನು ಹೊಂದಿರುವ ಸಣ್ಣ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಾಡಿಗೆ ಶುಲ್ಕದಲ್ಲಿ 50% ಸಹಾಯಧನ ನೀಡುವ ‘ರೈತ ಮಿತ್ರ’ ಕಾರ್ಯಕ್ರಮಕ್ಕೂ ಒತ್ತು.
ಬೆಳೆ ವಿಮೆ ಬಾಕಿ, ಬೀಜ–ಗೊಬ್ಬರ ಪೂರೈಕೆ ಸೇರಿದಂತೆ ರೈತರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇಡೀ ಕರ್ನಾಟಕವೇ ಟೆಕ್ ಹಬ್! ‘ಬಿಯಾಂಡ್ ಬೆಂಗಳೂರು’ಗೆ ಬಿಗ್ ಬೂಸ್ಟ್
ಬೆಂಗಳೂರು ಹೊರತಾಗಿಯೂ ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ–ಧಾರವಾಡ, ಮಂಗಳೂರು ಹಾಗೂ ಮೈಸೂರು ನಗರಗಳನ್ನು ಜಾಗತಿಕ ತಂತ್ರಜ್ಞಾನ ಕೇಂದ್ರಗಳಾಗಿ ಬೆಳೆಸಲು ಸರ್ಕಾರ ಮುಂದಾಗಿದೆ.
ದೊಡ್ಡಬಳ್ಳಾಪುರದಲ್ಲಿ ಅಡ್ವಾನ್ಸ್ಡ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಮೂಲಕ ₹20 ಸಾವಿರ ಕೋಟಿ ಹೂಡಿಕೆ ಮತ್ತು ಸುಮಾರು 1 ಲಕ್ಷ ಉದ್ಯೋಗ ಸೃಷ್ಟಿ ಗುರಿ ಇಡಲಾಗಿದೆ.
ಬೆಂಗಳೂರು ಮೇಲಿನ ಒತ್ತಡ ಕಡಿಮೆ ಮಾಡಿ, ರಾಜ್ಯದ ಬೇರೆ ನಗರಗಳಲ್ಲೂ ಹೂಡಿಕೆ, ಕೈಗಾರಿಕೆ ಮತ್ತು ಉದ್ಯೋಗದ ಅವಕಾಶ ಹೆಚ್ಚಿಸುವುದು ‘ಬಿಯಾಂಡ್ ಬೆಂಗಳೂರು’ ಯೋಜನೆಯ ಪ್ರಮುಖ ಉದ್ದೇಶ.