Close Menu
    Facebook X (Twitter) Instagram
    • ಮುಖಪುಟ
    • ತಾಜಾ ಸುದ್ದಿ
    • ಜಿಲ್ಲೆ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ರಾಜಕೀಯ
    • ಚಿತ್ರರಂಗ
    • ಅಪರಾಧ
    • ಕ್ರೀಡೆ
    Facebook X (Twitter) Instagram
    Home»Bangalore»congress»‘ತಾಕತ್ತಿದ್ದರೆ ನುಗ್ಗಿ ತೋರಿಸು’.. ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಸವಾಲ್!
    congress

    ‘ತಾಕತ್ತಿದ್ದರೆ ನುಗ್ಗಿ ತೋರಿಸು’.. ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಸವಾಲ್!

    praveenBy praveenSeptember 13, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಮತ್ತೊಂದು ಹಂತಕ್ಕೆ ತಲುಪಿದೆ. ಪೊಲೀಸ್ ಠಾಣೆಗೆ ನುಗ್ಗುವುದಾಗಿ ಪ್ರತಾಪ್ ಸಿಂಹ ನೀಡಿದ್ದ ಹೇಳಿಕೆಗೆ ಪ್ರದೀಪ್ ಈಶ್ವರ್ ಇದೀಗ ಖಾರವಾಗಿ ತಿರುಗೇಟು ನೀಡಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರದೀಪ್ ಈಶ್ವರ್, “ನುಗ್ಗಿ ತೋರಿಸು, ನಾನು ನಿನ್ನನ್ನು ಚಾಲೆಂಜ್ ಮಾಡ್ತೀನಿ. ನಿನಗೆ ಪರಪ್ಪನ ಅಗ್ರಹಾರ ಗ್ಯಾರಂಟಿ” ಎಂದು ಸವಾಲು ಹಾಕಿದ್ದಾರೆ. ಅಷ್ಟೇ ಅಲ್ಲದೆ, “ತಾಕತ್ತಿದ್ದರೆ ಟ್ರೈ ಮಾಡು ಮಗ, ಆಲ್ ದಿ ಬೆಸ್ಟ್ ರಣಹೇಡಿ” ಎಂದು ವ್ಯಂಗ್ಯವಾಡಿದ್ದಾರೆ.

    ಅಷ್ಟಕ್ಕೂ ಈ ವಾಕ್ಸಮರಕ್ಕೆ ಕಾರಣವಾಗಿದ್ದು ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ನಡೆದ ಗಣೇಶೋತ್ಸವದ ಶಾಂತಿ ಸಭೆ. ಗಣೇಶ ಮೆರವಣಿಗೆ ವೇಳೆ ಪೊಲೀಸರು ಸೂಚಿಸುವ ಮಾರ್ಗವನ್ನೇ ಬಳಸಬೇಕು ಹಾಗೂ ಮಸೀದಿ ಮುಂದೆ ಮೆರವಣಿಗೆ ನಡೆಸುವುದು ಅಥವಾ ಪಟಾಕಿ ಸಿಡಿಸುವಂತಿಲ್ಲ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಸೂಚನೆ ನೀಡಿದ್ದರು.

    ಪೊಲೀಸ್ ಅಧಿಕಾರಿಯ ಈ ಹೇಳಿಕೆಗೆ ಪ್ರತಾಪ್ ಸಿಂಹ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಪೊಲೀಸರು ಇದೇ ರೀತಿಯ ಹೇಳಿಕೆ ನೀಡುವುದನ್ನು ಮುಂದುವರಿಸಿದರೆ, ತಾವೇ ಪೊಲೀಸ್ ಠಾಣೆಗೆ ನುಗ್ಗುವುದಾಗಿ ಎಚ್ಚರಿಕೆ ನೀಡಿದ್ದರು.

    ಪ್ರತಾಪ್ ಸಿಂಹ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಇದೇ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಪ್ರತಿಕ್ರಿಯಿಸಿ, ಪೊಲೀಸ್ ಠಾಣೆಗೆ ನುಗ್ಗುವವರಿಗೆ ಮುಕ್ತ ಆಹ್ವಾನವಿದೆ. ಠಾಣೆಗೆ ನುಗ್ಗಿದ ಬಳಿಕ ನೇರವಾಗಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು ಎಂದು ವ್ಯಂಗ್ಯವಾಡಿದ್ದರು.

    ಇದೀಗ ಪ್ರದೀಪ್ ಈಶ್ವರ್ ಕೂಡ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಾಪ್ ಸಿಂಹ ಅವರಿಗೆ ನೇರ ಸವಾಲು ಹಾಕಿದ್ದಾರೆ. ‘ನುಗ್ಗಿ ತೋರಿಸು’ ಎಂಬ ಸವಾಲಿನ ಮೂಲಕ ಇಬ್ಬರ ನಡುವಿನ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಇದೀಗ ಗಮನ ಸೆಳೆದಿದೆ.

    Breaking News Kannada News Karnataka News Karnataka Politics Latest News Political News ಕರ್ನಾಟಕ ಪಾಲಿಟಿಕ್ಸ್ ಕರ್ನಾಟಕ ರಾಜಕೀಯ ಕರ್ನಾಟಕ ಸುದ್ದಿ ಕಾಂಗ್ರೆಸ್ ಪೊಲೀಸ್ ಠಾಣೆ ಪ್ರತಾಪ್ ಸಿಂಹ ಪ್ರತಾಪ್ ಸಿಂಹ vs ಪ್ರದೀಪ್ ಈಶ್ವರ್ ಪ್ರತಾಪ್ ಸಿಂಹ ಹೇಳಿಕೆ ಪ್ರದೀಪ್ ಈಶ್ವರ್ ಪ್ರದೀಪ್ ಈಶ್ವರ್ ಸವಾಲ್ ಬಿಜೆಪಿ ಬೆಂಗಳೂರು ಸುದ್ದಿ ಮೈಸೂರು ಸುದ್ದಿ ರಾಜಕೀಯ ವಾಕ್ಸಮರ ರಾಜಕೀಯ ಸುದ್ದಿ
    Share. Facebook Twitter Pinterest LinkedIn Tumblr Email
    praveen

    Related Posts

    ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ!

    October 15, 2026

    ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ!

    October 13, 2026

    ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ?

    October 13, 2026
    Leave A Reply Cancel Reply

    Quick Links

    • Home
    • About
    • Contact Us

    Social Media

    • Instagram
    • YouTube
    • Facebook

    Designed by Cryptical Software.