ಕರ್ನಾಟಕದ ಆರೋಗ್ಯ ಕವಚ–108 ಆಂಬುಲೆನ್ಸ್ ಸಿಬ್ಬಂದಿ ವೇತನ ಪರಿಷ್ಕರಣೆ, ಏಕರೂಪ ವೇತನ ಪದ್ಧತಿ, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ಹಾಗೂ ಉದ್ಯೋಗ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದಾರೆ.

ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯಗೊಂಡರೂ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡಿ ಸೇವೆಯಿಂದ ದೂರ ಉಳಿಯುವ ಎಚ್ಚರಿಕೆಯನ್ನು ಸಿಬ್ಬಂದಿ ನೀಡಿದ್ದಾರೆ.

ಸೇವೆ ಸ್ಥಗಿತಗೊಂಡರೆ ತುರ್ತು ವೈದ್ಯಕೀಯ ಸೇವೆ, ಅಪಘಾತ ಹಾಗೂ ರೋಗಿಗಳ ಆಸ್ಪತ್ರೆಗೆ ಸಾಗಣೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ.

Share.
Leave A Reply

Exit mobile version