
ಶಿವಮೊಗ್ಗದಲ್ಲಿ ವಂದೇ ಮಾತರಂ ಗಾಯನ ವಿಚಾರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಕೇವಲ ಎರಡು ಚರಣಗಳ ವಂದೇ ಮಾತರಂ ಹಾಡಿಸಿ ನಿಲ್ಲಿಸಿದ್ದಕ್ಕೆ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಂದೇ ಮಾತರಂ ಅನ್ನು ಸಂಪೂರ್ಣವಾಗಿ ಹಾಡಬೇಕು ಎಂದು ಒತ್ತಾಯಿಸಿದ ಅವರು, ಕಾರ್ಯಕ್ರಮದಿಂದಲೇ ಹೊರನಡೆದಿದ್ದಾರೆ.
ಸರ್ಕಾರದ ಆದೇಶದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಎರಡು ಚರಣಗಳನ್ನು ಮಾತ್ರ ಹಾಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಖಂಡಿಸಿರುವ ಚನ್ನಬಸಪ್ಪ, ಸರ್ಕಾರದ ನಿರ್ಧಾರದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಹಾಗೂ ಜನಾಂದೋಲನ ನಡೆಸುವುದಾಗಿ ಹೇಳಿದ್ದಾರೆ.
ಈ ಘಟನೆ ಇದೀಗ ಶಿವಮೊಗ್ಗದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.